ಮಂಗಳೂರು: ಮಸೂದ್ ನರ್ಸಿಂಗ್ ಕಾಲೇಜು ಕ್ರೀಡಾ ಕೂಟ
Update: 2018-01-31 20:45 IST
ಮಂಗಳೂರು, ಜ.31: ನಗರದ ಮಸೂದ್ ಕಾಲೇಜು ಮತ್ತು ಸ್ಕೂಲ್ ಆಫ್ ನರ್ಸಿಂಗ್‌ನ ಕ್ರೀಡಾಕೂಟವು ನಗರದ ಮಂಗಳ ಸ್ಟೇಡಿಯಂನಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್‌ನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವೇಟ್‌ಲಿಫ್ಟರ್ ಅಸೋಸಿಯೇಶನ್ ಉಪಾಧ್ಯಕ್ಷರೂ ಆಗಿರುವ ಎ. ತಾರಾನಾಥ ಶೆಟ್ಟಿ ಪಾರಿವಾಳವನ್ನು ಹಾರಿ ಬಿಡುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಅನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾಲೇಜಿನ ಕ್ರೀಡಾ ನಾಯಕಿ ನೀತಿ ಪ್ರಮಾಣ ವಚನ ಬೋಧಿಸಿದರು. ವೇದಿಕೆಯಲ್ಲಿ ಮಸೂದ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಗುಲ್ಶನ್ ಪರ್ವೀನ್, ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಗ್ರೆಟ್ಟಾ ತೌರೋ, ಕ್ರೀಡಾ ನಿರ್ದೇಶಕಿ ವಿಜೇತಾ ಕೊಟ್ಟಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಈ ಸಂದರ್ಭ ವಿವಿಧ ಕ್ರೀಡಾ ಕೂಟಗಳನ್ನು ಆಯೋಜಿಸಲಾಯಿತು.