×
Ad

ಫೆ.1: ಹಾಲಾಡಿ ರಾಜಿನಾಮೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2018-01-31 21:24 IST

ಕುಂದಾಪುರ, ಜ.31: ರಾಜ್ಯ ಸರಕಾರದಿಂದ ಬಜೆಟ್ ಮಂಡನೆಯಾಗುವ ಈ ಮಹತ್ವದ ಸಂದರ್ಭ  ಕ್ಷೇತ್ರಕ್ಕೆ ಅಗತ್ಯದ ಅನುದಾನವನ್ನು ಮಂಜೂರು ಮಾಡಿಸುವ ಮತ್ತು ಕ್ಷೇತ್ರದ ಹಲವಾರು ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವ ಬದಲು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿ ಕ್ಷೇತ್ರದ ಜನತೆಗೆ ವಿಶ್ವಾಸ ದ್ರೋಹ ಬಗೆದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಕ್ರಮವನ್ನು ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್, ಕೋಟ ಬ್ಲಾಕ್ ಕಾಂಗ್ರೆಸ್, ಕುಂದಾಪುರ ಇಂಟಕ್ ಸಂಸ್ಥೆಗಳ ನೇತೃತ್ವದಲ್ಲಿ  ಫೆ.1ರ  ಬೆಳಗ್ಗೆ 10 ಗಂಟೆಗೆ ಕುಂದಾಪುರ ಶಾಸ್ತ್ರೀ ಸರ್ಕಲ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಸಮಾನ ಮನಸ್ಕರು ಹಾಗೂ ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News