ಪೀಟರ್ ಡಿಸೋಜಾ

Update: 2018-01-31 16:47 GMT

ಬಂಟ್ವಾಳ, ಜ.31: ವಿಟ್ಲ ಕಸಬಾ ಗ್ರಾಮದ ಬೂಡು ನಿವಾಸಿ, ಪ್ರಗತಿಪರ ಕೃಷಿಕ ಪೀಟರ್ ಡಿಸೋಜಾ (74) ಅವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಮೃತರು ಪತ್ನಿ, ವಿಟ್ಲ ಗ್ರಾಪಂ ಮಾಜಿ ಸದಸ್ಯೆ ತೆರೆಸಾ ಡಿಸೋಜ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. 

ವಿಟ್ಲ ಮಂಡಲ ಪಂಚಾಯತ್ ಸದಸ್ಯರಾಗಿ, ಭೂ ನ್ಯಾಯ ಮಂಡಳಿಯ ಸದಸ್ಯರಾಗಿ, ವಿಟ್ಲ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ನಾಮನಿರ್ದೇಶಿತ ಸದಸ್ಯರಾಗಿ ಶ್ರಮಿಸಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ಅವರು ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ