×
Ad

ಮಹಾದಾಯಿ ಸಮಸ್ಯೆ ಪರಿಹರಿಸದಿದ್ದರೆ ಕರ್ನಾಟಕಕ್ಕೆ ಕಾಲಿಡಬೇಡಿ: ಮೋದಿ ವಿರುದ್ದ ಚಂಪಾ ಆಕ್ರೋಶ

Update: 2018-02-01 20:02 IST

ಬೆಂಗಳೂರು, ಫೆ.1: ಹಲವು ಸಮಯದಿಂದ ಕಳಸಾ ಬಂಡೂರಿ ಮತ್ತು ಮಹಾದಾಯಿ ಹೋರಾಟ ನಡೆಯುತ್ತಿದೆ. ಆದರೆ ಪರಿಹಾರ ದೊರೆತಿಲ್ಲ. ಪ್ರಧಾನಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥ ಮಾಡಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಬರುವುದೇ ಬೇಡ ಎಂದು ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ತಮ್ಮ ಆಕ್ರೋಶ ಹೊರಹಾಕಿದರು.

ಗುರುವಾರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಜನ ಸಾಮಾನ್ಯರ ಪಕ್ಷ ನೇತೃತ್ವದಲ್ಲಿ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಚಂಪಾ, ಈಗಾಗಲೇ ಸಾಕಷ್ಟು ಸಮಯದಿಂದ ಕಳಸಾ ಬಂಡೂರಿ ಮತ್ತು ಮಹಾದಾಯಿ ಹೋರಾಟ ನಡೆಯುತ್ತಿದೆ. ಆದರೆ ಪರಿಹಾರ ದೊರೆತಿಲ್ಲ. ರಾಜಕೀಯ ಪಕ್ಷಗಳು ರಾಜಕೀಯ ಮಾಡುತ್ತಿರುವುದಕ್ಕೆ ನನ್ನ ವಿರೋಧವಿದೆ ಎಂದ ಅವರು, ಪ್ರಧಾನಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥ ಮಾಡಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಬರುವುದೇ ಬೇಡ ಎಂದು ಹೇಳಿದರು.

ಜನಸಾಮಾನ್ಯರ ಪಕ್ಷದ ಅಧ್ಯಕ್ಷ ಡಾ.ಡಿ.ಅಯ್ಯಪ್ಪಮಾತನಾಡಿ, ರಾಜಕಾರಣ ಬಿಟ್ಟು ನೀರು ಕೊಡಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು. ಕಳಸಾ ಬಂಡೂರಿ ವಿಚಾರದಲ್ಲಿ ಮೋದಿ ರಾಜ್ಯಕ್ಕೆ ಬರುವ ಮುಂಚೆ ಎನ್‌ಒಸಿ ಕೊಡಬೇಕು ಎಂದ ಅವರು, ಕನ್ನಡಪರ ಸಂಘಟನೆಗಳು ಬಂದ್‌ಗೆ ಕರೆ ನೀಡುವುದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ, ಮಹಾತ್ಮಾ ಗಾಂಧಿ ಹಾಕಿಕೊಟ್ಟ ಮಾರ್ಗದಲ್ಲಿ ಪ್ರತಿಭಟನೆ ಮಾಡಬೇಕು ಎಂದ ಅವರು, ಫೆ.4 ರಂದು ಬಂದ್ ಮಾಡುವುದನ್ನು ವಿರೋಧಿಸಿದರು.

ಮಹಾದಾಯಿ-ಕಳಸಾಬಂಡೂರಿ ಹೋರಾಟಗಾರರು, ಯೋಜನೆಯ ಬಗ್ಗೆ ತುಟಿಬಿಚ್ಚದ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೆ ಮಧ್ಯಪ್ರವೇಶಿಸಿ ವಿವಾದ ಬಗೆಹರಿಸಬೇಕು. ಇಲ್ಲವಾದಲ್ಲಿ ಫೆ.4ರಂದು ಕರ್ನಾಟಕಕ್ಕೆ ಮೋದಿ ಕಾಲಿಡಬಾರದೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜನಸಾಮಾನ್ಯರ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಟಿ.ವಿ.ಸತೀಶ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News