×
Ad

ಫೆ.4ರ ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ: ರಾಮಲಿಂಗಾರೆಡ್ಡಿ

Update: 2018-02-01 20:08 IST

ಬೆಂಗಳೂರು, ಫೆ. 1: ನರೇಂದ್ರ ಮೋದಿಯವರು ಬಿಜೆಪಿ ಪ್ರಧಾನಿಯಲ್ಲ, ಅವರು ದೇಶದ ಪ್ರಧಾನಿ. ಹೀಗಾಗಿ ಫೆ. 4ರಂದು ರಾಜ್ಯಕ್ಕೆ ಆಗಮಿಸುವ ಸಂದರ್ಭದಲ್ಲಿ ಬಂದ್ ನಡೆಸಲು ಅವಕಾಶವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ, ಕನ್ನಡಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬೆಂಗಳೂರು ಬಂದ್ ಆಚರಣೆ ಬದಲಿಗೆ ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಿ. ನಮ್ಮ ಪ್ರಧಾನಿಗೆ ಗೌರವ ನೀಡುವುದು ರಾಜ್ಯದ ಕರ್ತವ್ಯ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿದ್ದು, ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News