ಮಡಿಕೇರಿ: ನೀರಿನಲ್ಲಿ ಮುಳುಗಿ ಮೃತ್ಯು
Update: 2018-02-01 22:04 IST
ಮಡಿಕೇರಿ, ಫೆ.1 : ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಗರದ ಕೂಟುಹೊಳೆಯಲ್ಲಿ ನಡೆದಿದೆ.
ನಗರಕ್ಕೆ ನೀರು ಪೂರೈಸುವ ಕೂಟುಹೊಳೆಯ ಹಿನ್ನೀರಿನಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಗಾಳಿಬೀಡು ಗ್ರಾಮದ ಹರೀಶ್(37) ಎಂದು ಗುರುತಿಸಲಾಗಿದೆ.
ತನ್ನ ನಾಲ್ಕೈದು ಮಂದಿ ಸ್ನೇಹಿತರೊಂದಿಗೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ಸಮೀಪದ ಕೂಟುಹೊಳೆಗೆ ಈಜಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ನೀರಿಗಿಳಿದಿದ್ದ ಮೂವರಲ್ಲಿ ಇಬ್ಬರು ಈಜಿ ದಡ ಸೇರಿದರೆ ಹರೀಶ್ ಈಜಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಈಜುಗಾರರು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.