×
Ad

ಮಡಿಕೇರಿ: ಯುವ ಒಕ್ಕೂಟದಿಂದ “ನೆರೆಹೊರೆ ಯುವಜನ ಸಂಸತ್ತು” ಕಾರ್ಯಕ್ರಮ

Update: 2018-02-01 23:15 IST

ಮಡಿಕೇರಿ, ಫೆ.1 : ಕೊಡಗು ಜಿಲ್ಲಾ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ ಹಾಗೂ ಗಾಳಿಬೀಡು ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ “ನೆರೆಹೊರೆ ಯುವಜನ ಸಂಸತ್ತು” ಎಂಬ ಕಾರ್ಯಕ್ರಮ ನಡೆಯಿತು.

ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಕಾರ್ಯಕ್ರವನ್ನು ತಾಲೂಕು ಯುವ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಗಿರೀಶ್ ತಾಳತ್ತಮನೆ ಉದ್ಘಾಟಿಸಿದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥರಾದ ಡಾ. ಶ್ರೀಧರ್ ಹೆಗಡೆ ಅವರು ನೆಹರು ಯುವ ಕೇಂದ್ರದಿಂದ ಯುವ ಸಂಘಗಳಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಆಂಗ್ಲ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಅವರು “ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಬೇಕಾದ ಯುವ ಜನತೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಉಪಾನ್ಯಸಕರು, ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ್, ಕಾರ್ಯದರ್ಶಿ ಇಂದುಮತಿ ಹಾಗೂ ಒಕ್ಕೂಟದ ಸದಸ್ಯರುಗಳು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News