ಗೂಡ್ಸ್ ವಾಹನ ಢಿಕ್ಕಿ : ಸೈಕಲ್ ಸವಾರ ಮೃತ್ಯು

Update: 2018-02-02 11:46 GMT

ಶಿವಮೊಗ್ಗ, ಫೆ. 2: ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿಕಾರಿಪುರ- ಆನಂದಪುರ ರಸ್ತೆಯ ಕಾಳೇನಹಳ್ಳಿ ಗ್ರಾಮದ ಸಮೀಪ ನಡೆದಿದೆ.

ರಾಮಪ್ಪ ಮೃತಪಟ್ಟ ಸೈಕಲ್ ಸವಾರ ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News