ಭೋಪಾಲ್: ಕಾಂಗ್ರೆಸ್ ಶಾಸಕನ ವಿರುದ್ಧ ಅಪಹರಣ, ಅತ್ಯಾಚಾರ ಪ್ರಕರಣ ದಾಖಲು

Update: 2018-02-02 15:52 GMT

ಭೋಪಾಲ್, ಫೆ. 2: ಇಪ್ಪತ್ತೊಂದು ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಹೇಮಂತ್ ಕಟಾರೆ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರುದಾರೆ ಯುವತಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭೋಪಾಲ ಕೇಂದ್ರ ಕಾರಾಗೃಹದಲ್ಲಿದ್ದಾರೆ.

‘‘ಯುವತಿಯ ದೂರು ಆಧರಿಸಿ ಹೇಮಂತ್ ಕಟಾರೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’’ ಎಂದು ಭೋಪಾಲ್ ದಕ್ಷಿಣದ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಲೋಧಾ ತಿಳಿಸಿದ್ದಾರೆ.

ಹೇಮಂತ್ ಕಟಾರೆ ಅವರಿಂದ ಹಣ ಸುಲಿಗೆ ಮಾಡಿದ ಆರೋಪದಲ್ಲಿ ಜನವರಿ 24ರಂದು ಪತ್ರಿಕೋದ್ಯಮ ವಿದ್ಯಾರ್ಥಿಯನ್ನು ಬಂಧಿಸಲಾಗಿತ್ತು.

ಜೈಲಿನಲ್ಲಿರುವ ಯುವತಿ ದಾಖಲಿಸಿದ ದೂರನ್ನು ಬೋಫಾಲ್ ಕೇಂದ್ರ ಕಾರಾಗೃಹದ ಅಧೀಕ್ಷಕ ಪೊಲೀಸ್ ಅಧಿಕಾರಿಗಳಿಗೆ ರವಾನಿಸಿದ ಬಳಿಕ ಕಟಾರೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಲೋಧಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News