×
Ad

ಕಾನೂನು ಬಾಹಿರ ವಾಣಿಜ್ಯ ಮಳಿಗೆ ನಿರ್ಮಾಣ: ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Update: 2018-02-02 23:15 IST

ಬೆಂಗಳೂರು, ಫೆ.2: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಡಿವಾಳ ಮಾರುಕಟ್ಟೆಯಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಸಂಬಂಧ ರೆಗ್ಗಿ ಥಾಮಸ್ ಮತ್ತು ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಫೆ.5ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಮಡಿವಾಳ ರಸ್ತೆಯು 40 ರಿಂದ 60 ಅಡಿ ಮಾತ್ರ ಅಗಲವಿದ್ದು, ಈ ರಸ್ತೆಯಲ್ಲಿಯೇ ಬಿಬಿಎಂಪಿಯವರು ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕಾನೂನು ಬಾಹಿರವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಈ ಮಳಿಗೆಗಳನ್ನು ತೆರವುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News