ಫೆ.5ರಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ

Update: 2018-02-03 14:22 GMT

ಬೆಂಗಳೂರು, ಫೆ. 3: ವಿಧಾನ ಮಂಡಲ ಜಂಟಿ ಅಧಿವೇಶನ ಫೆ.5ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಫೆ.5ರ ಬೆಳಗ್ಗೆ 6ಗಂಟೆಯಿಂದ ಫೆ.9ರ ಮಧ್ಯರಾತ್ರಿ 12ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದು, ಶಸ್ತ್ರ, ದೊಣ್ಣೆ, ಕತ್ತಿ ಸೇರಿ ಮಾರಕಾಸ್ತ್ರಗಳ ಸಾಗಾಣೆ, ಸ್ಪೋಟಕ ವಸ್ತುಗಳ ಸಿಡಿಸುವುದು, ಪ್ರಚೋದನಕಾರಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News