ಉಡುಪಿಗೆ ಕಾಂಗ್ರೆಸ್ ವೀಕ್ಷಕ ಮಂಜುನಾಥ್ ಭಂಡಾರಿ
Update: 2018-02-03 21:48 IST
ಉಡುಪಿ, ಫೆ.3: ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಫೆ.5ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿ ಗಳು, ವಿವಿಧ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಗೂ ಬ್ಲಾಕ್ ಸಮಿತಿ ವೀಕ್ಷಕರು ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಲಿದೆ.
ಈ ಸಭೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಿಸಲ್ಪಟ್ಟ ವೀಕ್ಷಕರಾದ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಆಗಮಿಸಲಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.