×
Ad

ತಾಲೂಕು ಮಟ್ಟದ ಯುವ ಜನಮೇಳಕ್ಕೆ ಪ್ರಯತ್ನ: ಸಂಸದ ನಳಿನ್

Update: 2018-02-03 22:03 IST

ಪುತ್ತೂರು, ಫೆ. 3: ಯಾವುದೇ ಸ್ಪರ್ಧೆ ನಡೆಯಬೇಕಾದರೆ ಅದು ತಾಲೂಕು, ಜಿಲ್ಲಾ ಮತ್ತೆ ರಾಜ್ಯಮಟ್ಟಕ್ಕೆ ಹೋಗುವುದು ಅನಿವಾರ್ಯ. ಆದರೆ ಈ ಬಾರಿ ತಾಲೂಕು ಮಟ್ಟದ ಯುವಜನ ಮೇಳ ನಡೆದಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ಸ್ಪರ್ಧೆ ನಡೆಸುವಲ್ಲಿ ಪ್ರಯತ್ನ ನಡೆಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮತ್ತು ರಾಜ್ಯ ಯುವಜನ ಒಕ್ಕೂಟ, ತಾ.ಪಂ ಪುತ್ತೂರು, ತಾಲೂಕು ಯುವಜನ ಒಕ್ಕೂಟ, ನಗರಸಭೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕಳೆದ 2 ದಿನಗಳಿಂದ ಪುತ್ತೂರಿನ ನೆಹರುನಗರ ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವಜನ ಮೇಳದ 3ನೇ ದಿನವಾದ ಶನಿವಾರ ಆಗಮಿಸಿ ಸ್ಪರ್ಧಾ ಕಾರ್ಯಕ್ರಮ ವೀಕ್ಷಣೆ ಮಾಡಿದರು. ನಾಡಿನ ಕಲೆ ಮತ್ತು ಸಂಸ್ಕೃತಿ ಉಳಿಯಲು ಇಂತಹ ಯುವಜನ ಮೇಳ ಅಗತ್ಯ. ಇಲ್ಲಿ ಪ್ರಶಸ್ತಿ ಪಡೆದವರು ಇನ್ನಷ್ಟು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಹಾರೈಸಿದರು.

ರಾಜ್ಯ ಯುವಜನ ಮೇಳದ ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ, ಸದಸ್ಯ ರಾಧಾಕೃಷ್ಣ ಬೋರ್ಕರ್, ನಗರಸಭಾ ಸದಸ್ಯ ಜೀವಂಧರ್ ಜೈನ್, ತಾಲೂಕು ಯವ ಸಬಲೀಕರಣ ಕ್ರೀಡಾಧಿಕಾರಿ ಮಾಮಚ್ಚನ್, ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಶೈಲೇಶ್ ಅಂಬೆಕ್ಕಲ್ಲು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News