×
Ad

ಗುಂಡ್ಲುಪೇಟೆ: ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ

Update: 2018-02-03 22:41 IST

ಗುಂಡ್ಲುಪೇಟೆ,ಫೆ.03: ತಾಲೂಕಿನ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಪ್ರಥಮದರ್ಜೆ ಕಾಲೇಜಿನಲ್ಲಿ 1 ಕೋಟಿ 42 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸಕ್ಕರೆ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅದರಲ್ಲಿಯೂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಗ್ರಾಮದ ಪ್ರಥಮದರ್ಜೆ ಕಾಲೇಜಿನಲ್ಲಿ ಎರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪಾಲಕರು ಹಾಗೂ ವಿದ್ಯಾರ್ಥಿಗಳು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಜನಾಂಗದವರ ಬಡಾವಣೆಯಲ್ಲಿ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಮಹೇಶ್, ತಾಪಂ ಸದಸ್ಯ ರೇವಣ್ಣ, ಚಾಮುಲ್ ನಿರ್ದೇಶಕ ಕಣ್ಣೇಗಾಲಸ್ವಾಮಿ, ಗ್ರಾಮಂ ಅಧ್ಯಕ್ಷ ಮಹದೇವೇಗೌಡಮ್ ಸದಸ್ಯ ಕಲ್ಲಳ್ಳಿ ಮಹೇಶ್, ಕಾಲೇಜಿನ ಪ್ರಾಂಶುಪಾಲ ಡಾ.ಮಹದೇವಪ್ರಸಾದ್ ಸೇರಿದಂತೆ ಹಲವರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News