ಎರಡನೇ ಏಕದಿನ: ಭಾರತಕ್ಕೆ ಭರ್ಜರಿ ಜಯ

Update: 2018-02-04 12:50 GMT

ಸೆಂಚೂರಿಯನ್, ಫೆ.4: ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್(ಔಟಾಗದೆ 51) ಹಾಗೂ ನಾಯಕ ವಿರಾಟ್ ಕೊಹ್ಲಿ(ಅಜೇಯ 46)ಎರಡನೇ ವಿಕೆಟ್‌ಗೆ ಸೇರಿಸಿದ 93 ರನ್ ನೆರವಿನಿಂದ ಭಾರತ ತಂಡ ದಕ್ಷಿಣ ಆಫ್ರಿಕ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆದ್ದುಕೊಂಡಿದೆ.

 ರವಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಸ್ಪಿನ್ನರ್‌ಗಳಾದ ಯಜುವೇಂದ್ರ ಚಹಾಲ್(5-22) ಹಾಗೂ ಕುಲ್‌ದೀಪ್ ಯಾದವ್(3-20)ಸಾಹಸದಿಂದ ದಕ್ಷಿಣ ಆಫ್ರಿಕವನ್ನು ಕೇವಲ 118 ರನ್‌ಗೆ ನಿಯಂತ್ರಿಸಿದ್ದ ಭಾರತ ಗೆಲುವಿಗೆ ಸುಲಭ ಸವಾಲು ಪಡೆದಿತ್ತು.

 ಭಾರತ 26 ರನ್ ಗಳಿಸುವಷ್ಟರಲ್ಲಿ ರೋಹಿತ್ ಶರ್ಮ(15) ವಿಕೆಟ್‌ನ್ನು ಕಳೆದುಕೊಂಡಿತ್ತು. ಆಗ ಎರಡನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 100 ಎಸೆತಗಳಲ್ಲಿ 93 ರನ್ ಸೇರಿಸಿದ ಭಾರತ 20.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿ ಜಯಭೇರಿ ಬಾರಿಸಿತು. ಈ ಗೆಲುವಿನ ಮೂಲಕ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News