ಗುಂಡ್ಲುಪೇಟೆ: ಕಾಂಗ್ರೆಸ್ ಮುಖಂಡರ ಸಭೆ

Update: 2018-02-04 13:59 GMT

ಗುಂಡ್ಲುಪೇಟೆ,ಫೆ.04: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ಮುಖಂಡರಿಂದ ಗೌಪ್ಯವಾಗಿ ಮಾಹಿತಿ ಕಲೆಹಾಕಿ ಕೆಪಿಸಿಸಿಗೆ ವರದಿ ಕಳುಹಿಸಲಾಗುವುದು ಎಂದು ಎಐಸಿಸಿ ಚುನಾವಣಾ ವೀಕ್ಷಕ ಪ್ರೇಮ್ ಕುಮಾರ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬರುವ ಸಾರ್ವತ್ರಿಕ ಚುನಾವಣೆಗೆ ಈ ಕ್ಷೇತ್ರದಿಂದ ನಮ್ಮ ಪಕ್ಷ ಸೂಚಿಸುವ ಅಭ್ಯರ್ಥಿಯ ಬಗ್ಗೆ ಸದ್ಯದಲ್ಲೇ ಮುಖಂಡರ ಸಭೆಯನ್ನು ನಡೆಸಿ ಕ್ಷೇತ್ರದ ಮುಖಂಡರಿಂದ ಮಾಹಿತಿಯನ್ನು ಕಲೆ ಹಾಕಲಾಗುವುದು ಮತ್ತು ಗೌಪ್ಯವಾಗಿ ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗುವುದು. ಹೀಗೆ ಸಂಗ್ರಹಣೆ ಮಾಡಿದ ಮಾಹಿತಿ ಮತ್ತು ಅಭಿಪ್ರಾಯವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೀಡಲಾಗುವುದು ಎಂದರು.

ಈ ಸಭೆಯಲ್ಲಿ ಕೆಪಿಸಿಸಿ ವೀಕ್ಷಕ ಚಂದ್ರಮೌಳಿ, ಪ್ರಧಾನ ಕಾರ್ಯದರ್ಶಿ ವಾಸಂತಿಶಿವಣ್ಣ, ಕಾರ್ಯದರ್ಶಿಗಳಾದ ಲೋಕೇಶರಾವ್, ನರೇಂದ್ರ ಮತ್ತು ಶಿವನಾಗಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಕೆ.ಪಿ.ಸಿ.ಸಿ.ಸದಸ್ಯ ಜಿ.ಕೆ.ನಾಜಿಮುದ್ದೀನ್, ಮಾಜಿ ಸಂಸದ ಎ.ಸಿದ್ದರಾಜು, ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಚಾಮುಲ್ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ಕನ್ನೇಗಾಲ ಸ್ವಾಮಿ ಯುವ ಮುಖಂಡ ಎಚ್.ಎಂ.ಗಣೇಶಪ್ರಸಾದ್, ಪುರಸಭೆ ಉಪಾಧ್ಯಕ್ಷ ಜಿ.ಕೆ.ನಾಗೇಂದ್ರ, ಸದಸ್ಯರಾದ ಪಿ.ಚಂದ್ರಪ್ಪ, ಬಿ.ವೆಂಕಟಾಚಲ, ಎ.ಪಿ.ಎಂ.ಸಿ.ಅಧ್ಯಕ್ಷ ಬಿ.ಕೆ.ಶಿವಪ್ಪ ಮತ್ತು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಮಂಚಳ್ಳಿಲೋಕೇಶ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News