×
Ad

ಜಗದೀಶ್ ಶೇಣವ ಹೇಳಿಕೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಖಂಡನೆ

Update: 2018-02-04 22:15 IST

ಮಂಗಳೂರು, ಫೆ. 4: ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ದ.ಕ. ಮತ್ತು ಉಡುಪಿ ಜಿಲ್ಲೆಯ ಸಭೆಯು ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಇತ್ತೀಚೆಗೆ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿರುವುದು ಕಾನೂನು ಬಾಹಿರ ಹಾಗೂ ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ಅದನ್ನು ತೀವ್ರವಾಗಿ ಖಂಡಿಸಲಾಯಿತು. ಅಲ್ಲದೆ, ಹಿಂದೂ ಮಹಾಸಭಾದ ಅಧ್ಯಕ್ಷ ನಾ.ಸುಬ್ರಹ್ಮಣ್ಯ ರಾಜು ಅವರು ಗಾಂಧೀಜಿ ಹತ್ಯೆಯನ್ನು ಸಮರ್ಥಿಸಿರುವುದು ಸಂವಿಧಾನ ಬಾಹಿರವಾಗಿದ್ದು, ಅದನ್ನು ಕೂಡ ಸಭೆಯಲ್ಲಿ ಖಂಡಿಸಲಾಯಿತು.

ಇತ್ತೀಚೆಗೆ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೈದ ಝೈಬುನ್ನಿಸಾ ಪ್ರಕರಣವನ್ನು ಸರ್ವಾನುಮತದಿಂದ ಖಂಡಿಸಿ ಝೈಬುನ್ನಿಸಾಳಿಗಾಗಿ ಪ್ರಾರ್ಥಿಸಲಾ ಯಿತು. ಈ ಬಗ್ಗೆ ಪೊಲೀಸ್ ಕಮಿಷನರ್‌ರನ್ನು ಭೇಟಿಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ನಿರ್ಧರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News