×
Ad

ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ

Update: 2018-02-05 20:23 IST

ಉಡುಪಿ, ಫೆ.5: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಉದ್ದೇಶಿಸಿದ್ದು, ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವೆಬ್‌ಸೈಟ್:www.stskillkar.in -ನಲ್ಲಿ ತಮ್ಮ ವಿವರಗಳನ್ನು ಫೆ.7ರಿಂದ ನೊಂದಾಯಿಸಲು ಅವಕಾಶವಿದೆ. ಹೆಸರು ನೊಂದಾಯಿಸಲು ಫೆ.21 ಕೊನೆಯ ದಿನವಾಗಿರುತ್ತದೆ.

 ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು/ಉಪನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆ/ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ/ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್ಸ್‌, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು (ದೂರವಾಣಿ:9972494764) ಇವರನ್ನು ಸಂಪರ್ಕಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News