ಕೋಲಾರ: 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಕೋಲಾರ,ಫೆ.5: ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಘಟಕದ ನಗರಾಧ್ಯಕ್ಷ ಯಾರಬ್ ಬಾಬಾ ರವರ ನೇತೃತ್ವದಲ್ಲಿ ವಾರ್ಡ್ ನಂ.32 ಅರಹಳ್ಳಿ ಗೇಟ್ ಅಪ್ನಾಘರ್ ಅಜಾದ್‍ನಗರದ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಘಟಕದ ನಗರಾಧ್ಯಕ್ಷ ಯಾರಬ್ ಬಾಬಾ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಳ್ಳುತ್ತಿರುವ ಜನಪರ ಯೋಜನೆಗಳನ್ನು ಮೆಚ್ಚಿ ಹಾಗೂ ಹಿಂದೆ ಯಡಿಯೂರಪ್ಪನವರ ಸರ್ಕಾರದಲ್ಲಿ ನೀಡಿದ ಉತ್ತಮ ಆಡಳಿತವನ್ನು ಮೆಚ್ಚಿ ಅಲ್ಪಸಂಖ್ಯಾತರು ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಪಕ್ಷವನ್ನು ಬಲಷ್ಟಗೊಳಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಚಹಳ್ಳಿ ವೆಂಕಟರೆಡ್ಡಿ, ಅಲ್ಪಸಂಖ್ಯಾತರು ಬಿಜೆಪಿ ಪಕ್ಷದ ವಿರೋಧಿಗಳು ಎಂದು ಬಿಂಬಿಸುತ್ತಿದ್ದ ಜೆಡಿಎಸ್ ಮತ್ತು ಇನ್ನಿತರ ಪಕ್ಷಗಳಿಗೆ ಮುಖಭಂಗ ಮಾಡುವ ರೀತಿಯಲ್ಲಿ ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಕೈ ಹಿಡಿಯುತ್ತಿರುವುದು ತುಂಬಾ ಸಂತಸದ ವಿಷಯವಾಗಿದೆ ಎಂದರು.