×
Ad

ಶಿವಮೊಗ್ಗ: ಗಾಂಜಾ ಮಾರಾಟ; ಇಬ್ಬರ ಬಂಧನ

Update: 2018-02-06 17:39 IST

ಶಿವಮೊಗ್ಗ, ಫೆ. 6: ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದ ಚಾಮೇಗೌಡ ಲೇನ್ ಮೂಪಾ ಕಾಂಪೌಂಡ್ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. 

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕೂಲಿ ಬ್ಲಾಕ್ ಶೆಡ್ ನಿವಾಸಿ ಇಮ್ರಾನ್ (21) ಹಾಗೂ ಜಟ್‍ಪಟ್ ನಗರದ ನಿವಾಸಿ ಮಂಜುನಾಥ್ (24) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಆರೋಪಿಗಳಿಂದ 180 ಗ್ರಾಂ ಗಾಂಜಾ, 1100 ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News