×
Ad

ಮಡಿಕೇರಿ: ಫೆ.9 ರಂದು ಜಿಲ್ಲಾ ಯುವ ಪ್ರಶಸ್ತಿ ಪ್ರದಾನ ಸಮಾರಂಭ

Update: 2018-02-06 17:48 IST

ಮಡಿಕೇರಿ,ಫೆ.6 : ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಿಳೋದಯ ಮಹಿಳಾ ಒಕ್ಕೂಟ ಹಾಗೂ ಮೂರು ತಾಲೂಕುಗಳ ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಫೆ. 9 ರಂದು 2017-18 ನೇ ಸಾಲಿನ ಕೊಡಗು ಜಿಲ್ಲಾ ಯುವ ಸಮಾವೇಶ, ಯುವ ಸಮ್ಮೇಳನ, ಕಾರ್ಯಾಗಾರ, ತರಬೇತಿ ಯುವ ಕೃತಿ ಪ್ರದರ್ಶನ ಹಾಗೂ ಜಿಲ್ಲಾ ಯುವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಎಂ.ಡಿ.ಹರೀಶ್, ಫೆ.9 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎಂ.ಆರ್.ಸೀತಾರಾಂ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಡಿ.ಹೆಚ್. ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವರಾದ ಪ್ರಮೋದ್ ಮಧ್ವರಾಜ್, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ. ಹರೀಶ್ ಸೇರಿದಂತೆ, ಕೊಡಗು-ಮೈಸೂರು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ, ವೀರಾಜಪೇಟೆ ಶಾಸಕರಾದ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಎಂ.ಪಿ. ಶಶಿ ಸುಬ್ರಮಣಿ, ಮಡಿಕೇರಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಮತ್ತು ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ  ಸೇರಿದಂತೆ ಕೊಡಗು ಜಿಲ್ಲಾ ಪಂಚಾಯತ್ ನ ಸದಸ್ಯರು ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ ಮಾತನಾಡಿ ಸಮಾರಂಭದಲ್ಲಿ ನೆಹರು ಯುವ ಸಂಘ ಪ್ರಶಸ್ತಿಯನ್ನು ತಾಳತ್ತಮನೆಯ ನೇತಾಜಿ ಯುವತಿ ಮಂಡಳಿಗೆ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆಂದು ಮಾಹಿತಿ ನೀಡಿದರು. ಇದರೊಂದಿಗೆ ಯುವ ಸಬಲೀಕರಣ ಇಲಾಖೆಯ ವತಿಯಿಂದ ಯುವಕ ಮತ್ತು ಯುವತಿ ಸಂಘ ಪ್ರಶಸ್ತಿ ನೀಡಲಾಗುತ್ತದೆ. ಈ 2 ಪ್ರಶಸ್ತಿ ತಲಾ 10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ. ಅಲ್ಲದೆ, ಕ್ರೀಡೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಐವರಿಗೆ ವೈಯಕ್ತಿಕ ಪ್ರಶಸ್ತಿಯನ್ನು ನೀಡಲಾಗುವುದೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಶೋಭಾರಾಜ್, ಜಿಲ್ಲಾ ಕಾರ್ಯದರ್ಶಿ ಇಂದುಮತಿ ರವೀಂದ್ರ, ಜಿಲ್ಲಾ ಖಜಾಂಚಿ ರಾಣಿ ಅಯ್ಯಪ್ಪ, ಯುವ ಒಕ್ಕೂಟದ ಸದಸ್ಯರಾದ ಕೆ.ಕೆ. ಗಣೇಶ್ ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News