ಕಡೂರು: ಬೈಕ್‌ಗೆ ಲಾರಿ ಢಿಕ್ಕಿ; ಮೂವರು ಯುವಕರು ಮೃತ್ಯು
Update: 2018-02-06 19:34 IST
ಚಿಕ್ಕಮಗಳೂರು, ಫೆ. 6: ಲಾರಿಯೊಂದು ಚಾಲಕನ ನಿರ್ಲಕ್ಷ್ಯದಿಂದ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದ ಕುಂತಿಹೊಳೆ ಸಮೀಪ ನಡೆದಿದೆ.
ಮೃತರನ್ನು ಕಡೂರು ತಾಲೂಕಿನ ಮುಗುಳಿಕಟ್ಟೆ ಗ್ರಾಮದ ನರಸಿಂಹಮೂರ್ತಿ (18), ಭಾಸ್ಕರ (20), ಸಂತೋಷ್ (19) ಎಂದು ಗುರುತಿಸಲಾಗಿದೆ.
ಅವರು ಕಡೂರುನಿಂದ ಮುಗುಳಿಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಅತಿ ವೇಗ ಹಾಗು ಅಜಾಗರೂಕತೆಯಿಂದ ಧಾವಿಸಿ ಬಂದ ಲಾರಿ ಬೈಕಿಗೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.