×
Ad

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

Update: 2018-02-06 22:12 IST

ಮಂಗಳೂರು, ಫೆ.6: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಜರಗಿತು.

ಮಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ. ಬಾವಾ ಪಕ್ಷದ ಮೇಲಿನ ಪ್ರೀತಿ, ವಿಶ್ವಾಸ, ಗೌರವದಿಂದ ಪ್ರತಿಯೊಬ್ಬ ಕಾರ್ಯಕರ್ತನೂ ಸಕ್ರಿಯವಾಗಬೇಕಾಗಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಹೇಳುವ ಪ್ರಾಮಾಣಿಕ ಕಾರ್ಯ ನಡೆಯಬೇಕಾಗಿದೆ ಎಂದರು.

ಜಿಲ್ಲೆಯ ಎಲ್ಲಾ 1,766 ಬೂತ್‌ಗಳಲ್ಲಿ ತಲಾ 25 ಕಾರ್ಯಕರ್ತರನ್ನು ತರಬೇತಿಗೊಳಿಸಿ ಪಕ್ಷದ ಪ್ರಚಾರಕ್ಕೆ ಸಜ್ಜುಗೊಳಿಸಲಾಗಿದೆ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಮತ್ತೆ ಮುಂದುವರಿಸುವುದರ ಮೂಲಕ ಜಿಲ್ಲೆಯ ಎಂಟು ಕ್ಷೇತಗಳಲ್ಲೂ ಜಯಭೇರಿ ಭಾರಿಸುವ ತಂತ್ರೋಪಾಯವನ್ನು ರೂಪಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ಸಭೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ರಾಜಶೇಖರ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್‌ನ ಮುಂಚೂಣಿ ಘಟಕದ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕೋಶಾಧಿಕಾರಿ ಶಶಿಧರ್ ಹೆಗ್ಡೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News