ಹನೂರು: ಸವಿತಾ ಸಮಾಜದ ನೂತನ ಸಂಘ ಉದ್ಘಾಟನಾ ಕಾರ್ಯಕ್ರಮ

Update: 2018-02-06 17:15 GMT

ಹನೂರು,ಫೆ.06: ಸವಿತಾ ಸಮಾಜವು ತೀರಾ ಹಿಂದುಳಿದ ಸಮಾಜವಾಗಿದ್ದು, ಸಾಮಾಜಿಕವಾಗಿ ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಆದುದರಿಂದ ಸಮಾಜದವರು ಒಗ್ಗಟ್ಟು ಪ್ರದರ್ಶಿಸಿ ಆರ್ಥಿಕವಾಗಿ, ಸಾಮಾಜಿಕವಾಗಿ ಮುಖ್ಯ ವಾಹಿನಿಗೆ ಬರಬೇಕು ಎಂದು ಚಾಮರಾಜನಗರ ತಾಲೂಕು ಸಂಘದ ಅಧ್ಯಕ್ಷ ಚಿನ್ನಸ್ವಾಮಿ ತಿಳಿಸಿದರು.

ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಸವಿತಾ ಸಮಾಜದ ನೂತನ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಚಿನ್ನಸ್ವಾಮಿ, ಸವಿತ ಸಮಾಜವು ತೀರಾ ಹಿಂದುಳಿದಿದ್ದು, ಸರ್ಕಾರದಿಂದ ಸಿಗುವ ಸವಲತ್ತುಗಳು ಮತ್ತು ಕುಶಲಕರ್ಮಿಗಳಿಗೆ ದೊರಕುವ ಪ್ರೋತ್ಸಾಹ ಧನಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮಾಜದಲ್ಲಿ ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡಬೇಕು. ಸವಿತಾ ಸಮಾಜಕ್ಕೆ ಇದುವರೆಗೂ ಸಮರ್ಪಕವಾದ ರಾಜಕೀಯ ಪ್ರಾತಿನಿಧ್ಯ ದೊರಕುತ್ತಿಲ್ಲ. ಆದುದರಿಂದ ಮುಂದಿನ ದಿನಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಒದಗಿಸಲು ಸ್ಥಳೀಯ ಶಾಸಕರು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಸಂಘದ ನೂತನ ನಾಮಫಲಕವನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷೆ ಮಮತಾ ಮಹಾದೇವು, ಉಪಾಧ್ಯಕ್ಷ ಬಸವರಾಜು, ಟಿಎಪಿಸಿಎಂಎಸ್ ನಿರ್ದೇಶಕ ಮಾದೇಶ್, ಹನೂರು ತಾಲೂಕು ಅಧ್ಯಕ್ಷ ರಾಜು, ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News