ಮೈಸೂರು: ಪ್ರತ್ಯೇಕ ಪ್ರಕರಣ; ಇಬ್ಬರು ಆತ್ಮಹತ್ಯೆಗೆ ಶರಣು

Update: 2018-02-06 17:29 GMT

ಮೈಸೂರು,ಫೆ.6: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮೊದಲ ಪ್ರಕರಣದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಜೆಎಸ್ ಎಸ್ ವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ಮಾಡುತ್ತಿರುವ ಪುಟ್ಟಹಾರಿಕಾ(21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಆಂಧ್ರದ ವಿಜಯವಾಡ ಮೂಲದ ಈಕೆ ಬನ್ನಿಮಂಟಪದಲ್ಲಿರುವ ಕಾಲೇಜಿನ ಹಾಸ್ಟೇಲ್ ನಲ್ಲಿ ಉಳಿದುಕೊಂಡಿದ್ದರು. ನಿನ್ನೆ ಸಹಪಾಠಿಗಳು ಎಂದಿನಂತೆ ಕಾಲೇಜಿಗೆ ಹೋದ ಬಳಿಕ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ, ಜೀವನದಲ್ಲಿ ಜುಗುಪ್ಸೆಗೊಂಡ ಮಹಿಳೆಯೋರ್ವರು ವಿಪರೀತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂರ್ಗಳ್ಳಿಯ ಮಂಜುಳಾ(40) ಎಂಬವರೇ ರವಿವಾರ ಮಾತ್ರೆ ಸೇವಿಸಿದ್ದರು. ಪ್ರಜ್ಞಾಹೀನ ಸ್ಥೀತಿಯಲ್ಲಿರುವುದನ್ನು ಗಮನಿಸಿದ ಮನೆಯವರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News