×
Ad

ಮಠಗಳನ್ನು ಸರಕಾರದ ಸುಪರ್ದಿಗೆ ತರುವ ಉದ್ದೇಶವಿಲ್ಲ: ರುದ್ರಪ್ಪ ಲಂಬಾಣಿ

Update: 2018-02-07 20:38 IST

ಬೆಂಗಳೂರು, ಫೆ.7: ರಾಜ್ಯದಲ್ಲಿರುವ ಧಾರ್ಮಿಕ ಸಂಸ್ಥೆಗಳನ್ನು, ಮಠಗಳನ್ನು ಸರಕಾರದ ಧಾರ್ಮಿಕ ದತ್ತಿ ಕಾಯ್ದೆಯ ವ್ಯಾಪ್ತಿಗೆ ತರುವಂತಹ ಯಾವುದೇ ಉದ್ದೇಶ ಸರಕಾರದ ಮುಂದಿಲ್ಲವೆಂದು ಮುಜರಾಯಿ ಸಚಿವ ರುದ್ರಪ್ಪ ಲಂಬಾಣಿ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಆದೇಶದಂತೆ ಧಾರ್ಮಿಕ ದತ್ತಿ ಕಾಯ್ದೆಗೆ ಕೆಲವೊಂದು ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಂದ ಸಲಹೆ, ಸೂಚನೆ, ಅಹವಾಲನ್ನು ಸ್ವೀಕರಿಸಲಾಗುತ್ತಿದೆ. ಇದರಲ್ಲಿ ಧಾರ್ಮಿಕ ಸಂಸ್ಥೆಗಳನ್ನು, ಮಠಗಳನ್ನು ಧಾರ್ಮಿಕ ದತ್ತಿ ಕಾಯ್ದೆಯಡಿ ತರುವ ಉದ್ದೇಶ ಸರಕಾರಕ್ಕಿಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರು ಧಾರ್ಮಿಕ ವಿಚಾರದಲ್ಲಿ ಜನತೆಯನ್ನು ದಾರಿ ತಪ್ಪಿಸಲು ಹೊರಟಿದ್ದಾರೆ. ಈ ಬಗ್ಗೆ ರಾಜ್ಯದ ಜನತೆ ಎಚ್ಚರಿಕೆಯಿಂದಿರಬೇಕು. ರಾಜ್ಯ ಸರಕಾರ ಯಾವುದೆ ಕಾರಣಕ್ಕೂ ಹಿಂದೂ, ಬೌದ್ಧ, ಜೈನ್ ಹಾಗೂ ಲಿಂಗಾಯಿತ ಮಠಗಳನ್ನು ಧಾರ್ಮಿಕ ದತ್ತಿ ಕಾಯ್ದೆಯಡಿಗೆ ತರುವ ಉದ್ದೇಶ ಹೊಂದಿಲ್ಲವೆಂದು ಸ್ಪಷ್ಟಪಡಿಸಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News