×
Ad

ಕಲಿ ಯೋಗೀಶ್ ಹೆಸರಲ್ಲಿ ಉದ್ಯಮಿಗೆ ಬೆದರಿಕೆ: ದೂರು

Update: 2018-02-07 21:14 IST

ಮಂಗಳೂರು, ಫೆ. 7: ಉದ್ಯಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನಿಲ್‌ದಾಸ್‌ಗೆ ಭೂಗತ ಪಾತಕಿ ಕಲಿ ಯೋಗೀಶನ ಹೆಸರಲ್ಲಿ ಬೆದರಿಕೆ ಕರೆ ಬಂದಿರುವ ಬಗ್ಗೆ ಕದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಲಿ ಯೋಗೀಶ್ ಹೆಸರಲ್ಲಿ ಕೆಲವು ದಿನಗಳಿಂದ ಬೆದರಿಕೆ ಕರೆ ಬರುತ್ತಿದ್ದು, ಅವರು ನಿರ್ಲಕ್ಷ್ಯ ಮಾಡಿದ್ದರು. ಮಂಗಳವಾರ ಮತ್ತೆ ಕರೆ ಬಂದಿದ್ದು, ತಕ್ಷಣವೇ 50 ಲಕ್ಷ ರೂ. ನೀಡಬೇಕು. ಈ ಬಾರಿ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಅನಿಲ್‌ದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News