×
Ad

ಪತ್ನಿಯ ಕೊಲೆಯತ್ನ: ಆರೋಪಿಗೆ ನ್ಯಾಯಾಂಗ ಬಂಧನ

Update: 2018-02-07 21:29 IST

ಕಾರ್ಕಳ, ಫೆ.6: ಅಜೆಕಾರು ಸಮೀಪದ ಹೆರ್ಮುಂಡೆ ಎಂಬಲ್ಲಿ ಪತ್ನಿಯ ಕೈ ಮತ್ತು ಕಾಲುಗಳನ್ನು ಕತ್ತಿಯಿಂದ ಕ್ರೂರವಾಗಿ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರೋಪಿ ಹೆರ್ಮುಂಡೆ ಗ್ರಾಮದ ಪಬ್ಬರ್ಬೆಟ್ಟು ನಿವಾಸಿ ಸಂತೋಷ ಪೂಜಾರಿ(27)ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದು ಬೆಳಗ್ಗೆ ಆರೋಪಿಯನ್ನು ಅಜೆಕಾರು ಪೊಲೀಸರು ಕಾರ್ಕಳ ನ್ಯಾಯಾ ಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಅದರಂತೆ ಆರೋಪಿಯನ್ನು ಕಾರವಾರಕ್ಕೆ ಸ್ಥಳಾಂತರಗೊಂಡಿರುವ ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದೆ.

ಜ.27ರಂದು ಪತ್ನಿ ಅನುಶ್ರೀ (23)ಯ ಕೈಕಾಲುಗಳನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಸಂತೋಷ್ ಪೂಜಾರಿಯನ್ನು ಉಡುಪಿ ಡಿಸಿಐಬಿ ಪೊಲೀಸರು ಫೆ. 6ರಂದು ಭಟ್ಕಳ ರೈಲು ನಿಲ್ದಾಣದ ಬಳಿ ಬಂಧಿಸಿದ್ದರು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News