ಉಡುಪಿ: ಫೆ.8ರಂದು ಅಪಘಾತ ಜೀವರಕ್ಷಕ ತರಬೇತಿ ಕಾರ್ಯಾಗಾರ
Update: 2018-02-07 21:51 IST
ಉಡುಪಿ, ಫೆ.7: ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ಅಪಘಾತ ಜೀವ ರಕ್ಷಕ ತರಬೇತಿ ಕಾರ್ಯಗಾರ ಫೆ.8ರಂದು ನಡೆಯಲಿದೆ.
ಕಾರ್ಯಕ್ರಮ ಬೆಳಗ್ಗೆ 9:30ಕ್ಕೆ ಉಡುಪಿ ಅಜ್ಜರಕಾಡಿನಲ್ಲಿರುವ ರೆಡ್‌ಕ್ರಾಸ್ ಸಭಾಭವನದಲ್ಲಿ ನಡೆಯಲಿದ್ದು, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.