×
Ad

​ಕೋಟೆಕಾರು : ಫೆ. 15 ರಿಂದ 2 ದಿನಕ್ಕೊಮ್ಮೆ ನೀರು

Update: 2018-02-07 21:52 IST

ಮಂಗಳೂರು, ಫೆ.7: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಫೆ. 15 ರಿಂದ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುವುದು ಎಂದು ಕೋಟೆಕಾರ್ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ನೀರಿನ ಬಳಕೆದಾರರು ತೆಂಗಿನ ಗಿಡ, ಹೂವಿನ ಗಿಡ ಹಾಗೂ ತೋಟಗಳಿಗೆ ನೀರನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಹಾಗೂ ಮೇ ಅಂತ್ಯದೊಳಗೆ ನೀರಿನ ಮೀಟರನ್ನು ಅಳವಡಿಸಿ ಕಚೇರಿಗೆ ವರದಿ ಮಾಡಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News