ಫೆ. 9: ಕವಿ ಎಂ. ಗೋಪಾಲಕೃಷ್ಣ ಅಡಿಗ ‘ಸಾಹಿತ್ಯಾವಲೋಕನ’ ವಿಚಾರ ಮಂಥನ
ಮಂಗಳೂರು, ಫೆ.7: ಕರ್ನಾಟಕ ತುಳು ಸಾತ್ಯ ಅಕಾಡಮಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಮತ್ತು ಕನ್ನಡ ವಿಭಾಗ, ಆಳ್ವಾಸ್ ಕಾಲೇಜುು ವತಿಯಿಂದ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಫೆ. 9ರಂದು ಬೆಳಗ್ಗೆ 9:30ಕ್ಕೆ ಕವಿ ಎಂ. ಗೋಪಾಲಕೃಷ್ಣ ಅಡಿಗ ಸಾಹಿತ್ಯಾವಲೋಕನ ವಿಚಾರ ಮಂಥನ ಕಾರ್ಯಕ್ರಮ ನಡೆಯಲಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ವಹಿಸಲಿದ್ದಾರೆ. ಬೆಂಗಳೂರಿನ ಕವಿ ಅಡಿಗ ಶತಮಾನ ಪ್ರತಿಷ್ಠಾನದ ನಿರ್ದೇಶಕ ಎಂ. ಜಯರಾಮ ಅಡಿಗ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪೂರ್ವಾಹ್ನ ಅಡಿಗರ ಕಾವ್ಯ ಸ್ಮತಿ -ವಿಸ್ಮತಿ, ಅಡಿಗರ ಕಾವ್ಯ ಮತ್ತು ಯುವ ಜನಾಂಗ, ಅಡಿಗರ ಗದ್ಯ ಸಾಹಿತ್ಯ ಎಂಬ 3 ವಿಚಾರಗೋಷ್ಠಿಗಳು ನಡೆಯಲಿವೆ. ಈ ಗೋಷ್ಠಿಯಲ್ಲಿ ಸಂಸ್ಕೃತಿ ಚಿಂತಕ ಲಕ್ಷ್ಮೀಶ ತೋಳ್ಪಾಡಿ, ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವರದರಾಜ ಚಂದ್ರಗಿರಿ ಹಾಗೂ ಪ್ರತಾಪಚಂದ್ರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಸಲಿದ್ದಾರೆ. ಸಂಜೆ 3 ಗಂಟೆಗೆ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳ್ಮಣ್ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜನಾರ್ದನ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ.ಪ್ರಕಟನೆಯಲ್ಲಿ ತಿಳಿಸಿದ್ದಾರೆ.