×
Ad

ರಾಜ್ಯ ಮಟ್ಟದ ಚೆಸ್ ಸ್ಪರ್ಧೆ: ಕ್ಷಿತಿಜ್ ಎಚ್.ಎಸ್ ಪ್ರಥಮ

Update: 2018-02-08 18:10 IST

ಪುತ್ತೂರು, ಫೆ. 8: 15 ವರ್ಷದೊಳಗಿನ ಬಾಲಕರ ವಿಭಾಗದ ಕರ್ನಾಟಕ ರಾಜ್ಯ ಮಟ್ಟದ ಮುಕ್ತ ಚೆಸ್ ಸ್ಪರ್ಧೆಯಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿ ಕ್ಷಿತಿಜ್ ಎಚ್. ಎಸ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ, ಹೊರನಾಡು ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್(ರಿ) ಜಿಲ್ಲಾ ಪತ್ರಕರ್ತರ ಸಂಘ, ಚಿಕ್ಕಮಗಳೂರು, ತಾಲ್ಲೂಕು ಪತ್ರಕರ್ತರ ಸಂಘ, ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 3 ಮತ್ತು 4ರಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಬಳಿಯಲ್ಲಿ ಸ್ಪರ್ಧೆ ನಡೆಸಲಾಗಿತ್ತು.

ಕ್ಷಿತಿಜ್ ಎಚ್.ಎಸ್ ಅವರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಹರಿಪ್ರಸಾದ್ ಡಿ.ಎಸ್. ಮತ್ತು ಸುಚಿತ ಪಿ.ಎಂ.ದಂಪತಿಯ ಪುತ್ರ. ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ರೂಪಕಲಾ ಕೆ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News