ಮಾಜಿ ಸೈನಿಕರ ಗಮನಕ್ಕೆ
Update: 2018-02-08 20:32 IST
ಉಡುಪಿ, ಫೆ.8: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕ ಬ್ರಿಗೇಡಿಯರ್ ಎಸ್.ಬಿ.ಸಜ್ಜನ ಇವರು ಫೆ.12ರಂದು ಜಂಟಿ ನಿರ್ದೇಶಕ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇಲ್ಲಿಗೆ ಭೇಟಿ ನೀಡಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಕುಟುಂಬದ ಸದಸ್ಯರು ನಿರ್ದೇಶಕ ರನ್ನು ಕಚೇರಿಯಲ್ಲಿ ಭೇಟಿ ಮಾಡಲು ಇಚ್ಛಿಸಿದಲ್ಲಿ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ಸ್ ಹತ್ತಿರವಿರುವ ಕಾರ್ಯಾಲಯಕ್ಕೆ ಬೇಟಿ ನೀಡಬಹುದು ಎಂದು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.