ಕಾಂಗ್ರೆಸ್ ವೀಕ್ಷಕರಾದ ಉಗ್ರಪ್ಪ, ವೀಣಾ ಅಚ್ಚಯ್ಯ ಉಡುಪಿ ಜಿಲ್ಲೆಗೆ
Update: 2018-02-08 22:02 IST
ಉಡುಪಿ, ಫೆ.8: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, 10 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿ ಗಳು ಹಾಗೂ ಜಿಲ್ಲೆಯ ವಿವಿಧ ಘಟಕಗಳ ಜಿಲ್ಲಾ ಪ್ರಮುಖರ ಸಭೆ ಫೆ.11ರಂದು ಅಪರಾಹ್ನ 3 ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.
ಸಭೆಯಲ್ಲಿ ಜಿಲ್ಲಾ ವೀಕ್ಷಕರಾದ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮತ್ತು ವೀಣಾ ಅಚ್ಚಯ್ಯ ಭಾಗವಹಿಸಲಿದ್ದು ಸಭೆಯ ನಂತರ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ವಿವರಗಳನ್ನು ಸಂಗ್ರಹಿಸಿ ಪ್ರದೇಶ ಕಾಂಗ್ರೆಸ್ ಸಮಿತಿಗೆ ಒಪ್ಪಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.