ಸಾಮಾನ್ಯ ವರ್ಗಕ್ಕೂ ಪಶುಭಾಗ್ಯ: ಸಚಿವ ಎ.ಮಂಜು

Update: 2018-02-09 13:06 GMT

ಬೆಂಗಳೂರು, ಫೆ. 9: ಮುಂದಿನ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಾದರಿಯಲ್ಲೇ ಸಾಮಾನ್ಯ ವರ್ಗದವರಿಗೆ ಪಶುಭಾಗ್ಯ ಯೋಜನೆಯ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಎ.ಮಂಜು ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಪಿ.ಎಂ.ನರೇಂದ್ರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ 22 ಸಾವಿರ ಮಂದಿಗೆ ಫಲಾನುಭವಿಗಳಿಗೆ ಪಶುಭಾಗ್ಯ ಸೌಲಭ್ಯ ಒದಗಿಸಲಾಗಿದೆ. ಜಾನುವಾರುಗಳ ಸಂಖ್ಯೆ ಆಧರಿಸಿ ಪಶುಭಾಗ್ಯ ಯೋಜನೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಪಶುಭಾಗ್ಯ ಯೋಜನೆಯಡಿ ಹೆಚ್ಚುವರಿ ನಿಗದಿಪಡಿಸಲಾಗಿದ್ದು, ಅದರನ್ವಯ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗಿದೆ ಎಂದ ಅವರು, ಮಳವಳ್ಳಿ ತಾಲೂಕಿಗೆ ಪಶುಭಾಗ್ಯ ಯೋಜನೆಯಡಿ ಒಟ್ಟು 399 ಮಂದಿ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News