ಗರಡಿ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಭೇಟಿ
Update: 2018-02-09 20:15 IST
ಮಂಗಳೂರು,ಫೆ.9: ಶಾಸಕ ಹಾಗೂ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಶುಕ್ರವಾರ ಕಂಕನಾಡಿ ಗರಡಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ಕೆ.ಚಿತ್ತರಂಜನ್, ವ್ಯವಸ್ಥಾಪಕ ಕಿಶೋರ್ ಮಜಿಲ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ವಸಂತ್ ಪೂಜಾರಿ, ಸಂದೀಪ್ ಗರೋಡಿ, ಕೌಶಿಕ್ ಗರೋಡಿ, ವಿದೀಶ್ ಡಿ.ಕೆ ಮತ್ತಿತರರು ಉಪಸ್ಥಿತರಿದ್ದರು.