ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2018-02-09 21:54 IST
ಅಜೆಕಾರು, ಫೆ.9: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮರ್ಣೆ ಗ್ರಾಮದ ನೂಜಿಗುರಿ ಎಂಬಲ್ಲಿ ನಡೆದಿದೆ.
ಮೃತರನ್ನು ಕರುಣಾಕರ ಹೆಗ್ಡೆ(56) ಎಂದು ಗುರುತಿಸಲಾಗಿದೆ. ಇವರು ಕೆಲಸದ ಬಗ್ಗೆ ಗುಡ್ಡೆಯಂಗಡಿಯಿಂದ ಅಜೆಕಾರಿಗೆ ರಸ್ತೆಯ ಬದಿ ನಡೆದುಕೊಂಡು ಬರುತ್ತಿರುವಾಗ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕರುಣಾಕರ ಹೆಗ್ಡೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.