ಉಚ್ಚಿಲದಲ್ಲಿ ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
Update: 2018-02-09 22:52 IST
ಪಡುಬಿದ್ರೆ, ಫೆ. 9: ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿದಲ್ಲಿ ನಡೆದಿದೆ.
ಮೃತರನ್ನು ಎರ್ಮಾಳು ತೆಂಕ ತೋಟದ ಮನೆ ನಿವಾಸಿ ಸುಂದರ ಶೆಟ್ಟಿ (70) ಎಂದು ಗುರುತಿಸಲಾಗಿದೆ.
ಅವರು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿ ಮನೆ ಕಡೆಗೆ ತೆರಳಲು ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಉಡುಪಿಯತ್ತ ತೆರಳು ತಿದ್ದ ಬೈಕ್ ಸುಂದರ ಶೆಟ್ಟಿಗೆ ಢಿಕ್ಕಿ ಹೊಡೆಯಿತು. ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.