ಎಂಇಪಿಗೆ ಡಿಎಸ್‌ಎಸ್ ಬೆಂಬಲ

Update: 2018-02-10 12:48 GMT

ಬೆಂಗಳೂರು, ಫೆ.10: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಮುಹಿಂದವಾದ)ಯು ಆಲ್ ಇಂಡಿಯಾ ಮಹಿಳಾ ಎಂಪವರ್‌ಮೆಂಟ್ ಪಾರ್ಟಿ(ಎಂಇಪಿ)ಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಸಮಿತಿ ವಕ್ತಾರ ಸಾರಥಿ ಸಾಸಾರಾಂ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆ ಅತ್ಯಂತ ಮಹತ್ತರ ಚುನಾವಣೆಯಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ದಲಿತರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಸರಕಾರ ದಲಿತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಕೇವಲ ಮತಬ್ಯಾಂಕ್‌ಗಾಗಿ ಬಳಸಿಕೊಳ್ಳಲಾಗುತ್ತಿದೆ. ಬಿಜೆಪಿ ಮೊದಲಿನಿಂದಲೂ ದಲಿತ ವಿರೋಧಿಯಾಗಿದೆ. ಹೀಗಾಗಿ, ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ನೂತನವಾಗಿ ಪಕ್ಷ ಕಟ್ಟಿರುವ ಡಾ.ನೌಹಿರಾ ಶೇಖ್‌ಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.

ದೇಶದಲ್ಲಿರುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕನಿಷ್ಠ ಪಕ್ಷ ಒಂದು ಸೀಮಿತ ಯೋಜನೆ ಘೋಷಣೆ ಮಾಡದೆ, ಕೇವಲ ಪೊಳ್ಳು ಭರವಸೆಗಳನ್ನು ಮಾತ್ರ ನೀಡಲಾಗುತ್ತಿದೆ. ಹೀಗಾಗಿ, ಅಂಬೇಡ್ಕರ್, ಬಸವಣ್ಣ, ಮಹಾತ್ಮಗಾಂಧಿಯಂತಹವರ ಆದರ್ಶಗಳೊಂದಿಗೆ ನೂತನ ಪಕ್ಷ ಕಟ್ಟಿದ್ದು, ದಲಿತರಿಗೆ ಇಲ್ಲಿ ನ್ಯಾಯ ಸಿಗಬಹುದು ಎಂಬ ಉದ್ದೇಶದಿಂದ ಈ ಪಕ್ಷಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News