ಆರೆಸ್ಸೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರ ಯಾಕಿಲ್ಲ : ಖರ್ಗೆ ಪ್ರಶ್ನೆ
ಬಳ್ಳಾರಿ (ಹೊಸಪೇಟೆ), ಫೆ.10: ಆರೆಸ್ಸೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಯಾಕಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂದು ಪ್ರಶ್ನಿಸಿದ್ದಾರೆ.
ಶನಿವಾರ ಬಳ್ಳಾರಿಯ ಹೊಸಪೇಟೆಯಲ್ಲಿ ಕೆಪಿಸಿಸಿ ಆಯೋಜಿಸಿದ್ದ ಜನಾಶೀರ್ವಾದ ಯಾತ್ರೆಗೆ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇದುವರೆಗೂ ಆರೆಸ್ಸೆಸ್ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟಿಲ್ಲ.ಇನ್ನು ಬಿಜೆಪಿ ನಾಯಕರು ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಅಂಬೇಡ್ಕರ್ ಅವರ ಹೆಸರನ್ನು ಹೇಳುತ್ತಾರೆ.ಅದೇ ರೀತಿ, ಮಹಾತ್ಮ ಗಾಂಧಿ ಅವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ನಮ್ಮ ಗೆಲವು ಖಚಿತ, ಈಗಾಗಲೇ ನಾವು 'ಮನೆಮನೆಗೆ ಕಾಂಗ್ರೆಸ್' ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇದು ಯಶಸ್ವಿಯಾಗುತ್ತಿದೆ. ಆದರೆ, ಬಿಜೆಪಿ ಸುಳ್ಳು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ.ಇನ್ನು ಬಿಜೆಪಿ ಪರಿವರ್ತನಾ ಯಾತ್ರೆ ಯಶಸ್ಸು ಕಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ತತ್ವಗಳನ್ನು ರಾಜ್ಯದ ಜನತೆ ವಿರೋಧಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ದೊರೆಯಲಿದೆ’
-ಮಲ್ಲಿಕಾರ್ಜುನ ಖರ್ಗೆ,ಲೋಕಸಭೆಯ ಪ್ರತಿಪಕ್ಷದ ನಾಯಕ