×
Ad

ದ.ಕ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದ ಆಪ್ ಸ್ಪರ್ಧೆ

Update: 2018-02-10 21:17 IST

ಸುರತ್ಕಲ್, ಫೆ.10: ಮುಂಧಿನ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಸಂಚಾಲಕ ಪಿ. ರಾಚೇಂದ್ರ ಕುಮಾರ್ ಹಾಗೂ ಜಿಲ್ಲಾ ಪ್ರಚಾರ ಘಟಕದ ಕಬೀರ್ ಕಾಟಿಪಳ್ಳ, ಈಗಾಗಲೇ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮುಲ್ಕಿ- ಮೂಡಬಿದಿರೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಉಳಿದ ಎಲ್ಲಾ ಕ್ಷೇತ್ರಗಳಿಗೆ ಆಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News