×
Ad

ಗ್ಯಾಸ್‌ಟ್ಯಾಂಕರ್ ಢಿಕ್ಕಿ: ಬೈಕ್‌ ಸಹಸವಾರ ಸಾವು

Update: 2018-02-10 22:27 IST

ಬೆಂಗಳೂರು, ಫೆ.10: ಬೈಕ್‌ಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ ವೀರೇಶ್(22) ಮೃತ ದುರ್ದೈವಿ. ನಗರದ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮೃತ ವೀರೇಶ್, ಶುಕ್ರವಾರ ರಾತ್ರಿ 11ಗಂಟೆ ಸುಮಾರಿಗೆ ತುಮಕೂರು ರಸ್ತೆಯ ಎಸ್.ಎಂ. ವೃತ್ತದ ಮೇಲುಸೇತುವೆ ಬಳಿ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಹಿಂಬದಿಯಿಂದ ಬಂದ ಗ್ಯಾಸ್ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News