×
Ad

ಬೆಂಗಳೂರು : ಫೆ.11ರಂದು ‘ವಿರಳ ಸಂಚಾರ ದಿನ’

Update: 2018-02-10 23:18 IST

ಬೆಂಗಳೂರು, ಫೆ. 10: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಹಾಗೂ ಸಂಚಾರ ದಟ್ಟಣೆ ನಿಯಂತ್ರಣ, ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರೋತ್ಸಾಹಿಸಲು ಪ್ರತಿ ತಿಂಗಳ ಎರಡನೆ ರವಿವಾರ ‘ವಿರಳ ಸಂಚಾರ ದಿನ’ ಆಚರಣೆ ಉದ್ಘಾಟನಾ ಸಮಾರಂಭವನ್ನು ಫೆ.11 ರಂದು ಏರ್ಪಡಿಸಲಾಗಿದೆ.

ವಿಧಾನಸೌಧದ ಮುಖ್ಯದ್ವಾರದ ಬಳಿ ರವಿವಾರ ಬೆಳಗ್ಗೆ 9 ಗಂಟೆಗೆ ‘ವಿರಳ ಸಂಚಾರ ದಿನ’ ಆಚರಣೆ ಉದ್ಘಾಟನಾ ಸಮಾರಂಭದಲ್ಲಿ ಚಿತ್ರ ನಟರಾದ ಪುನಿತ್ ರಾಜ್‌ಕುಮಾರ್, ಯಶ್, ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಸಚಿವರಾದ ರೋಷನ್ ಬೇಗ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ರಮಾನಾಥ ರೈ, ಬಿಬಿಎಂಪಿ ಮೇಯರ್ ಸಂಪತ್‌ರಾಜ್ ಪಾಲ್ಗೊಳ್ಳಲಿದ್ದಾರೆ.

ಬಿಎಂಟಿಸಿ ಅಧ್ಯಕ್ಷ ನಾಗರಾಜ ಯಾದವ್, ಸಾರಿಗೆ ಆಯುಕ್ತ ಬಿ. ದಯಾನಂದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಭಾಗವಹಿಸಲಿದ್ದಾರೆ. ಸಾರ್ವಜನಿಕರು ನಾಳೆ ತನ್ನ ಖಾಸಗಿ ವಾಹನಗಳನ್ನು ಬಳಸದೆ ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಅಥವಾ ಸಾಮೂಹಿಕ ಸಾರಿಗೆ ವಾಹನಗಳಲ್ಲಿ ಪ್ರಯಾಣಿಸಬೇಕೆಂದು ಸಾರಿಗೆ ಇಲಾಖೆ ಮನವಿ ಮಾಡಿದೆ.

ಸೈಕಲ್‌ಜಾಥಾ: 
‘ವಿರಳ ಸಂಚಾರ ದಿನ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಸೈಕಲ್ ಜಾಥಾ ಮತ್ತು ಬ್ಯಾಟರಿ ಚಾಲಿತ ವಾಹನಗಳ ಜಾಥಾ ಏರ್ಪಡಿಸಲಾಗಿದೆ’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News