ಅಕ್ರಂ ದಾಖಲೆ ಮುರಿದ ಹೆರಾತ್

Update: 2018-02-10 18:13 GMT

ಢಾಕಾ, ಫೆ.10: ಶ್ರೀಲಂಕಾದ ಎಡಗೈ ಸ್ಪಿನ್ನರ್ ರಂಗನ ಹೆರಾತ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಇನ್ನೊಂದು ಮೈಲುಗಲ್ಲು ಮುಟ್ಟಿದ್ದಾರೆ. 415ನೇ ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನದ ಸ್ಪಿನ್ ಮಾಂತ್ರಿಕ ವಸೀಮ್ ಅಕ್ರಂ ದಾಖಲೆಯನ್ನು ಮುರಿದಿದ್ದಾರೆ.

ಹೆರಾತ್ ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಯಶಸ್ವಿ ಎಡಗೈ ಬೌಲರ್ ಎನಿಸಿಕೊಂಡಿದ್ದಾರೆ.

ಬಾಂಗ್ಲಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್ ನ ಮೂರನೇ ದಿನವಾಗಿರುವ ಶನಿವಾರ ತೈಜುಲ್ ಇಸ್ಲಾಂ ವಿಕೆಟ್ ಉಡಾಯಿಸುವ ಮೂಲಕ ಈ ಸಾಧನೆ ಮಾಡಿದರು.

ಮೊದಲ ಇನಿಂಗ್ಸ್‌ನಲ್ಲಿ ವಿಕೆಟ್ ಪಡೆಯದೆ ಕೈ ಸುಟ್ಟುಕೊಂಡಿದ್ದ ಹೆರಾತ್ ಅವರು ಎರಡನೇ ಇನಿಂಗ್ಸ್‌ನಲ್ಲಿ 49ಕ್ಕೆ 4 ವಿಕೆಟ್ ಉಡಾಯಿಸಿದರು.

  ಈ ಮೊದಲು ಹೆರಾತ್ ಅವರು 400 ವಿಕೆಟ್ ಪಡೆದ ಮೊದಲ ಎಡಗೈ ಸ್ಪಿನ್ನರ್ ಮತ್ತು ವಿಶ್ವದ ಐದನೇ ಸ್ಪಿನ್ನರ್ ಎನಿಸಿಕೊಂಡಿದ್ದರು. ಸ್ಪಿನ್ ಲೆಜೆಂಡ್‌ಗಳಾದ ಮುತ್ತಯ್ಯ ಮುರಳೀಧರನ್, ಶೇನ್ ವಾರ್ನ್, ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಒಳಗೊಂಡ 400 ವಿಕೆಟ್ ಪಡೆದ ಸ್ಪಿನ್ನರ್‌ಗಳ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದರು.

  ಭಾರತದ ವಿರುದ್ಧ ಹೀನಾಯ ಸೋಲು ಅನುಭವಿಸಿದ ಬಳಿಕ ಮತ್ತೆ ಶ್ರೀಲಂಕಾ ಚೇತರಿಸಿಕೊಳ್ಳುವಲ್ಲಿ ಹೆರಾತ್ ದೊಡ್ಡ ಕೊಡುಗೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News