×
Ad

​ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರ

Update: 2018-02-11 19:12 IST

ಬೆಂಗಳೂರು, ಫೆ. 11: ‘ಲಿಂಗಾಯತ ಪ್ರತ್ಯೇಕ ಧರ್ಮ’ ಹೋರಾಟದಲ್ಲಿ ಸಕ್ರಿಯರಾಗಿರುವ ಮಾಜಿ ಸಚಿವ ಹಾಗೂ ಮೇಲ್ಮನೆ ಸದಸ್ಯ ಬಸವರಾಜ ಹೊರಟ್ಟಿ, ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.

ಹೊರಟ್ಟಿ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಪತ್ರ ಬರೆದಿರುವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾಸಭಾ ಮಹಾದಾನಿ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ.

ನಿಮ್ಮ ಮುಂದಿನ ಕೆಲಸಕ್ಕೆ ಬಸವಾದಿ ಶರಣರು ತಮ್ಮನ್ನು ಕೈಹಿಡಿದು ನಡೆಸಲಿ ಎಂದು ಶಿವಶಂಕರಪ್ಪ, ಮಹಾಸಭಾ ಪರವಾಗಿ ಪ್ರಾರ್ಥಿಸಿದ್ದಾರೆ. ಜ.25ರಂದು ಬಸವರಾಜ ಹೊರಟ್ಟಿ ವೀರಶೈವ ಮಹಾಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News