×
Ad

ಕೆಎಸ್‌ಒಯು ಪದವೀಧರರಿಗೆ ಅನ್ಯಾಯ : ಪ್ರೊ.ಎನ್.ಆರ್.ಶೆಟ್ಟಿ

Update: 2018-02-11 20:21 IST

ಬೆಂಗಳೂರು, ಫೆ.11: ಮೈಸೂರಿನಲ್ಲಿರುವ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ ಮಾನ್ಯತೆ ಕಳೆದುಕೊಂಡಿರುವುದರಿಂದ ಇಲ್ಲಿ ಪದವಿ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಆರ್.ಶೆಟ್ಟಿ ಬೇಸರ ವ್ಯಕ್ತಪಡಿಸಿದರು.

ರವಿವಾರ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ದೂರ ಶಿಕ್ಷಣ ಕುರಿತು ಅರಿವು ಮೂಡಿಸುವ ಧ್ವನಿ ಸುರಳಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೆಎಸ್‌ಒಯು ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಲು ನ್ಯಾಯಾಲಯ ಹಾಗೂ ಸರಕಾರ ಎರಡು ವಿಫಲವಾಗಿರುವುದು ಮತ್ತೊಂದು ಪ್ರಮಾದವೆಂದು ವಿಷಾಧಿಸಿದರು.

ಉದ್ಯೋಗವಕಾಶಗಳಲ್ಲಿ ಕೆಎಸ್‌ಒಯುನಲ್ಲಿ ಕಲಿತ ಪದವಿಧರರಿಗೆ ಮಾನ್ಯತೆ ಸಿಗುತ್ತಿಲ್ಲ. ಇದಿರಂದಾಗಿ ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳ ಹಲವು ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಟಿ.ಶ್ಯಾಮ್‌ಭಟ್, ಬೆಂಗಳೂರು ವಿವಿಯ ಮೌಲ್ಯಮಾಪನ ಕುಲಸಚಿವ ಸಿ.ಶಿವರಾಜು, ಬೆಂಗಳೂರು ವಿವಿ ಅಂಚೆ ತೆರಪು ಮತ್ತು ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ, ಸಿಂಡಿಕೇಟ್ ಸದಸ್ಯ ರವಿ, ಮಂಜುನಾಥ್, ವಿಜಯಸಿಂಹ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News