×
Ad

ಜಮ್ಮುವಿನಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: ಮಹಿಳೆ ಮೃತ್ಯು

Update: 2018-02-11 21:28 IST

ಜಮ್ಮು, ಫೆ. 11: ಜಮ್ಮು ಹಾಗೂ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಂಧರ್ ಪ್ರದೇಶದಲ್ಲಿ ಶನಿವಾರ ಸಂಜೆ ಪಾಕಿಸ್ತಾನ ಸೇನೆ ನಡೆಸಿದ ಮೋರ್ಟರ್ ದಾಳಿಯಲ್ಲಿ 65 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಂಧರ್‌ನ ರಕ್ಷಣಾ ಹಾಗೂ ನಾಗರಿಕ ಪ್ರದೇಶವನ್ನು ಗುರಿಯಾಗಿರಿಸಿ ಪಾಕಿಸ್ತಾನದ ಸೇನೆ ಸಣ್ಣ ಶಸ್ತ್ರಾಸ್ತ್ರ ಹಾಗೂ ಮೋರ್ಟಾರ್ ಶೆಲ್‌ಗಳ ಮೂಲಕ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತೀಯ ಸೇನಾ ಪಡೆ ಪ್ರತಿದಾಳಿ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News