ತಡೆಗೋಡೆಗೆ ಢಿಕ್ಕಿ ಹೊಡೆದ ಕಾರು : ಓರ್ವ ಮೃತ್ಯು
Update: 2018-02-11 22:16 IST
ಬೆಂಗಳೂರು, ಫೆ. 11: ಶರವೇಗದಲ್ಲಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಇಲ್ಲಿನ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ರವಿವಾರ ಸಂಭವಿಸಿದೆ.
ಭರತ್ (20)ಮೃತ ದುರ್ದೈವಿ. ಘಟನೆಯಲ್ಲಿ ಕಾರು ಚಾಲಕ ಲೋಕೇಶ್ ಗಾಯಗೊಂಡಿದ್ದಾರೆ. ಬೆಳಗಿನ ಜಾವ 3ಗಂಟೆ ಸುಮಾರಿಗೆ ನೈಸ್ ರಸ್ತೆ ಮಾರ್ಗದ ಮೂಲಕ ಬನ್ನೇರುಘಟ್ಟ ಬ್ರಿಡ್ಜ್ ಕಡೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಗೊತ್ತಾಗಿದೆ.
ಗಾಯಗೊಂಡಿರುವ ಲೋಕೇಶ್‌ನನ್ನು ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಳಿಮಾವು ಸಂಚಾರ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.