ಲೈಂಗಿಕ ಕಿರುಕುಳ ವಿರೋಧಿಸಿದ್ದಕ್ಕೆ ಬಾಲಕಿಗೆ ಬೆಂಕಿ ಹಚ್ಚಿದ ಬಾಲಕ

Update: 2018-02-12 14:29 GMT

ರಾಜ್ ಗರ್, ಫೆ.12: ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿದ್ದಕ್ಕಾಗಿ 13 ವರ್ಷದ ಬಾಲಕಿಯೊಬ್ಬಳಿಗೆ ಬಾಲಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.

ಬೆಂಕಿ ಹಚ್ಚಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ರಾಜ್ ಗರ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ದೇಹದ 50 ಶೇ,ದಷ್ಟು ಭಾಗ ಸುಟ್ಟಿದೆ. ಶನಿವಾರದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಹೆತ್ತವರು ಹೊಲಕ್ಕೆ ತೆರಳಿದ್ದ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಈ ಸಂದರ್ಭ ಮನೆಗೆ ನುಗ್ಗಿದ ಬಾಲಕ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ್ದಾನೆ. ಈ ಸಂದರ್ಭ ಬಾಲಕಿ ಆತನಿಗೆ ಪ್ರತಿರೋಧ ತೋರಿದ್ದು, ಬಾಲಕ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News