×
Ad

‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಗೆ 74ಕೋಟಿ ರೂ.ಅನುದಾನ: ಪ್ರಮೋದ್ ಮಧ್ವರಾಜ್

Update: 2018-02-12 20:31 IST

ಉಡುಪಿ, ಫೆ.12: ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ‘ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 74 ಕೋಟಿ ರೂ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಸೋಮವಾರ ಬ್ರಹ್ಮಾವರ ಸಮೀಪದ ಚಾಂತಾರಿನಲ್ಲಿ 305.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, ಎನ್‌ಹೆಚ್-16ರಿಂದ ಕೃಷಿಕೇಂದ್ರ ರಸ್ತೆ ಅಭಿವೃದ್ದಿ ಕಾಮಗಾರಿಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಗರ ಪ್ರದೇಶದ ರಸ್ತೆಗಳು ಅಭಿವೃದ್ದಿ ಹೊಂದಿದರೆ ಸಾಲದು, ಗ್ರಾಮೀಣ ಭಾಗದ ರಸ್ತೆಗಳೂ ಅಭಿವೃದ್ದಿ ಹೊಂದಬೇಕು. ಗ್ರಾಮೀಣ ಪ್ರದೇಶದ ಜನತೆಗೆ ಉತ್ತಮ ಗುಣಮಟ್ಟದ ರಸ್ತೆಬಾಗ್ಯ ಸಿಗಬೇಕು ಎನ್ನುವುದು ಮುಖ್ಯಮಂತ್ರಿಗಳ ಆಶಯ. ಇದಕ್ಕಾಗಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆ ಯಡಿ 45 ಕಾಮಗಾರಿಗಳಿಗೆ 74 ಕೋಟಿ ರೂ ಬಿಡುಗಡೆಯಾಗಿದ್ದು, ಈಗಾಗಲೇ 54 ಕೋಟಿ ವೆಚ್ಚದಲ್ಲಿ 33 ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಉಳಿದ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ. ಶೀಘ್ರದಲ್ಲಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ರಾಜಪಥಗಳಾಗಿ ಮಾರ್ಪಡಾಗಲಿವೆ ಎಂದು ಸಚಿವರು ಹೇಳಿದರು.

ಉಡುಪಿ ವಿಾನಸಾ ಕ್ಷೇತ್ರದಲ್ಲಿ ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆ ಯಡಿ 45ಕಾಮಗಾರಿಗಳಿಗೆ 74 ಕೋಟಿ ರೂ ಬಿಡುಗಡೆಯಾಗಿದ್ದು, ಈಗಾಗಲೇ 54 ಕೋಟಿ ವೆಚ್ಚದಲ್ಲಿ 33 ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಉಳಿದ ಕಾಮಗಾರಿಗಳು ಪ್ರಗತಿಯ ಹಂತದಲ್ಲಿವೆ. ಶೀಘ್ರದಲ್ಲಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಗ್ರಾಮೀಣ ಸೋಮವಾರ ಒಟ್ಟು 21 ಕೋಟಿ ರೂ. ಮೊತ್ತದ 6 ರಸ್ತೆ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಮತ್ತು 7 ಕೋಟಿ ರೂ.ಮೊತ್ತದ 2 ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸವನ್ನು ಸಚಿವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಪಂ ಸದಸ್ಯ ಜನಾರ್ದನ ತೋನ್ಸೆ, ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯೆ ಗೋಪಿ ನಾಯ್ಕ, ಸುನೀತಾ ಶೆಟ್ಟಿ, ದಿನಕರ ಪೂಜಾರಿ, ಚಾಂತಾರು ಗ್ರಾಪಂ ಅಧ್ಯಕ್ಷೆ ಸರಸ್ವತಿ, ಕರ್ಜೆ ಗ್ರಾಪಂ ಅಧ್ಯಕ್ಷೆ ನಾಗರತ್ನಾ , ಇಂಜಿನಿಯರ್‌ಗಳಾದ ಸತೀಶ್, ವಿಜಯೇಂದ್ರ, ತ್ರಿಣೇಶ್ವ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News